ಐಹೊಳೆ
ಭಾರತೀಯ ಶಿಲ್ಪಕಲೆಯ ತೊಟ್ಟಿಲು ಎನಿಸಿರುವ ಐಹೊಳೆಯು, ಬೆಂಗಳೂರಿನಿಂದ ೪೮೩ ಕಿ. ಮೀ ಗಳ ದೂರದಲ್ಲಿ ಮಲಪ್ರಭಾ ನದಿಯ ದಂಡೆಯಲ್ಲಿದೆ. ಬಾಗಲಕೋಟೆ ಜೆಲ್ಲೆಯ ಬಾದಾಮಿ ತಾಲ್ಲೂಕಿಗೆ ಸೇರಿದ ಐಹೊಳೆ ಚಾಲುಕ್ಯ ವಾಸ್ತುಶಿಲ್ಪದ ಒಂದು ದೊಡ್ಡ ಕೇಂದ್ರವಾಗಿದೆ.
ಐಹೊಳೆ | |
ಐಹೊಳೆ ನಗರದ ಪಕ್ಷಿನೋಟ | |
![]() ![]() ಐಹೊಳೆ
| |
ರಾಜ್ಯ - ಜಿಲ್ಲೆ |
ಕರ್ನಾಟಕ - ಬಾಗಲಕೋಟೆ |
ನಿರ್ದೇಶಾಂಕಗಳು | |
ವಿಸ್ತಾರ | {{{area_total}}} km² |
ಸಮಯ ವಲಯ | IST (UTC+5:30) |
ಜನಸಂಖ್ಯೆ - ಸಾಂದ್ರತೆ |
- {{{population_density}}}/ಚದರ ಕಿ.ಮಿ. |
ಕೋಡ್‍ಗಳು - ಪಿನ್ ಕೋಡ್ - ಎಸ್.ಟಿ.ಡಿ. - ವಾಹನ |
- 587138 - +08351 - |
ದೇವಾಲಯಗಳು
ಇಲ್ಲಿನ ದೇವಾಲಯಗಳ ನಿರ್ಮಾಣದಲ್ಲಿ ಔತ್ತರೇಯ ಪದ್ಧತಿಯ ಪ್ರಭಾವವು ಕಂಡು ಬರುತ್ತದೆ. ಐಹೊಳೆಯ ದೇವಾಲಯಗಳನ್ನು ಪುರಾತತ್ವ ಸರ್ವೇಕ್ಷಣ ಇಲಾಖೆ ೨೨ ವಿಭಾಗಳಾಗಿ ವಿಂಗಡಿಸಿದೆ. ಇದರಲ್ಲಿ ಹುಚ್ಚಿಮಲ್ಲಿಗುಡಿ, ಲಡಖಾನ್ ಗುಡಿ, ಹುಚ್ಚಪ್ಪಯ್ಯಮಠ, ಗಳಗನಾಥ, ರಾವಲ್ ಪಹಡಿ, ಗುಹಾಂತರ ದೇವಾಲಯ, ಜೈನರ ಮೇಗುತಿ ದೇವಾಲಯ, ಎರಡು ಅಂತಸ್ತಿನ ಜೈನ ದೇವಾಲಯ ಪ್ರಮುಖ ಆಕರ್ಷಣೆ.
ಇಲ್ಲಿನ ದೇವಾಲಯಗಳ ವಿಚಿತ್ರ ಹೆಸರುಗಳಿಗೆ ಐತಿಹಾಸಿಕವಾಗಿ ಯಾವ ಸಮರ್ಥನೆಯೂ ಸಿಗುವುದಿಲ್ಲ. ಬಹುಶ: ಬ್ರಿಟಿಷರ ಕಾಲದಲ್ಲಿ ಸರ್ವೇ ಮಾಡಲು ಪ್ರಾರಂಭಿಸಿದಾಗ ಆಯಾ ದೇವಾಲಯಗಳಲ್ಲಿ ಆಗ ವಾಸವಾಗಿದ್ದ ವ್ಯಕ್ತಿಗಳಿಂದ ಇಂಥ ಹೆಸರುಗಳು ಬಂದಿರುವ ಸಾಧ್ಯತೆ ಇದೆ.
೧. ಇಲ್ಲಿನ ದೇವಾಲಯಗಳಲ್ಲಿ ದುರ್ಗಾ ದೇವಾಲಯ ಅತ್ಯಂತ ಪ್ರಮುಖವಾದದ್ದು. ಇದು ಮೂಲತ: ಸೂರ್ಯದೇವಾಲಯವಾಗಿದ್ದು
ಕೋಟೆ ಅಂದರೆ ದುರ್ಗಕ್ಕೆ ಹತ್ತಿರವಿರುವುದರಿಂದ ದುರ್ಗ ದೇವಾಲಯವೆಂದು ಪ್ರಸಿದ್ಧವಾಗಿದೆ. ಕ್ರಿ ಶ 742ರಲ್ಲಿ 2ನೇ ವಿಕ್ರಮಾದಿತ್ಯನ
ಅಳಿಯ ಕೋಮಾರಸಿಂಗ ಎಂಬುವವ ಇದನ್ನು ಕಟ್ಟಿಸಿದ. ಎತ್ತರದ ಜಗತಿ ಮೇಲೆ ಕಟ್ಟಲಾಗಿದ್ದು ಗಜಪೃಷ್ಠಾಕಾರದಲ್ಲಿ ಇರುವುದು ಇದರ
ವಿಶೇಷತೆ. ಇದರ ಅಸಂಖ್ಯ ಕಲ್ಲಿನ ಕಂಬಗಳು ಹಾಗು ಇಂಗ್ಲೀಷ ಅಕ್ಷರದ U ಆಕಾರದ ವಿಶಿಷ್ಠ ರಚನೆಯಿಂದ ಹೊರನೋಟಕ್ಕೆ ದೆಹಲಿಯ
ಸಂಸತ್ ಭವನವನ್ನು ನೆನಪಿಸುತ್ತದೆ. ಐಹೊಳೆಯ ಕೋಟೆಯನ್ನು ಉತ್ತರ ರಸ್ತೆಯಿಂದ ಪ್ರವೇಶಿಸುತ್ತಿದ್ದಂತೆಯೇ ಕಾಣುವ ಕ್ರಿ.ಶ ೫ನೇ ಶತಮಾನದಲ್ಲಿ ನಿರ್ಮಿಸಲಾಗಿರುವ ಸುಂದರ ಹಾಗೂ ಮನಮೋಹಕ ಕೆತ್ತನೆಗಳಿಂದ ಕಂಗೊಳಿಸುವ ದುರ್ಗೆಯ ಮಂದಿರ ಮನಸೆಳೆಯುತ್ತದೆ.
ದೇವಾಲಯದ ಮುಖಮಂಟಪದ ಭಿತ್ತಿಯ ಅಡ್ಡಪಟ್ಟಿಕೆಗಳಲ್ಲಿ ರಾಮಲಕ್ಷ್ಮಣ ಸೀತಾಮಾತೆಯನ್ನು ಗುಹ -ನಾವೆಯ ನೆರವಿನಿಂದ ನದಿ ದಾಟಿಸಿದ ಸುಂದರ ಉಬ್ಬುಶಿಲ್ಪವಿದೆ. ಪುರಾಣ, ಪುಣ್ಯಕಥೆಗಳ ಹಲವು ಕಥಾನಕಗಳು ಇಲ್ಲಿವೆ.
೨. ಕ್ರಿ.ಶ.೪೫೦ರಲ್ಲಿ ನಿರ್ಮಿತವಾದ ಲಾಡಖಾನ್ದ್ದೇ ಇಲ್ಲಿನ ಪ್ರಾಚೀನ ದೇವಾಲಯ. ವಿಷ್ಣುವಿಗೆ ಸಮರ್ಪಿತವಾಗಿದ್ದ ದೇವಾಲಯದ ರಚನೆಯಲ್ಲಿ ಗುಪ್ತ ಸಂಪ್ರದಾಯದ ಪ್ರಭಾವವು ಕಂಡು ಬರುತ್ತದೆ. ಏಕೆಂದರೆ ಪೂರ್ಣ ಕಲಶ ಮತ್ತು ನಿಂತ ನಿಲುವಿನ ಗಂಗೆ-ಯಮುನೆಯರ ಆಕೃತಿಗಳು ಇಲ್ಲಿವೆ. ಇದರ ಹೆಸರಿಗೂ ದೇವಾಲಯಕ್ಕೂ ಯಾವುದೇ ಸಂಬಂಧವಿಲ್ಲ. ಬಹುಶ: ಮುಸ್ಲಿಂ ಸಂತನೊಬ್ಬ ಇಲ್ಲಿ ವಾಸವಾಗಿದ್ದರಿಂದ ಈ ಹೆಸರು ಬಂದಿರಬಹುದು. ಪೂರ್ವದಲ್ಲಿ ಇದೊಂದು ಸಮುದಾಯ ಭವನಾಗಿದ್ದು ನಂತರದ ಕಾಲಘಟ್ಟದಲ್ಲಿ ಗರ್ಭಗುಡಿಯನ್ನು ಸೇರಿಸಿದಂತಿದೆ. ಇಲ್ಲಿನ ಕಂಬವೊಂದರ ಮೇಲೆ ಚಳುಕ್ಯರ ರಾಜ ಲಾಂಛನ, ಕಲ್ಲಿನ ಏಣಿ ಹಾಗು ವಿವಿಧ ಚಿತ್ತಾರದ ಜಾಲಂಧ್ರಗಳು ಗಮನ ಸೆಳೆಯುತ್ತವೆ
೩. ಕ್ರಿ.ಶ.೬೩೪ರಲ್ಲಿ ೨ನೆಯ ಪುಲಿಕೇಶಿಯ ಕಾಲದಲ್ಲಿ ಅವನ ಆಶ್ರಯದಲ್ಲಿದ್ದ ರವಿಕೀರ್ತಿಯಿಂದ ಮೇಗುಟಿ(ಮೇಗುಡಿ ಅಂದರೆ ಮೇಲಿನ ಗುಡಿ) ದೇವಾಲಯವು ನಿರ್ಮಾಣವಾಯಿತು. ಎತ್ತರವಾದ ಸ್ಥಳದಲ್ಲಿರುವ ಕಾರಣ ದೇವಾಲಯಕ್ಕೆ ಈ ಹೆಸರು ಬಂದಿದೆ.ಜಿನನಿಗೆ ಸಮರ್ಪಿತ ವಾಗಿದ್ದ ಈ ಗುಡಿಯು ಗರ್ಭಗೃಹ ಮತ್ತು ನವರಂಗಗಳನ್ನು ಹೊಂದಿದೆ. ಇದು ಬೆಟ್ಟದ ಮೇಲಿದ್ದು ಎತ್ತರದ ಅಧಿಷ್ಠಾನದ ಮೇಲೆ ಕಟ್ಟಲಾಗಿದೆ. ಇದನ್ನು ಇಮ್ಮಡಿ ಪುಲಿಕೇಶಿಯ ಆಸ್ಥಾನದಲ್ಲಿದ್ದ ರವಿಕೀರ್ತಿ ಎಂಬ ಕವಿ ಕಟ್ಟಿಸಿದ. ಇಲ್ಲಿನ ಮುಖಮಂಟಪದ ಹೊರಭಿತ್ತಿಯ ಮೇಲೆ ಚಾಳುಕ್ಯ ಅರಸರ ವಂಶಾವಳಿ ಹಾಗು ಉತ್ತರ ಭಾರತದ ವಿಷ್ಣುವರ್ಧನ ಹಾಗು ಇಮ್ಮಡಿ ಪುಲಕೇಶಿ ನಡುವೆ ನಡೆದ ಯುದ್ಧದ ವಿವರಣಾತ್ಮಕ ಶಾಸನವಿದೆ. ಇಲ್ಲಿ ಮಹಡಿ ಮೇಲೊಂದು ಗರ್ಭಗುಡಿ ಇರುವುದು ವಿಶೇಷ. ಮೇಲಿರುವ ಗರ್ಭಗೃಹಕ್ಕೆ ಹೋಗಲು ಅಂತರಾಳದಲ್ಲಿ ಮೆಟ್ಟಿಲುಗಳಿವೆ. ಇದು ಕರ್ನಾಟಕದ ಅತ್ಯಂತ ಪುರಾತನ ಜಿನಾಲಯವಾಗಿದ್ದು ಅಧ್ಯನದ ದೃಷ್ಟಿಯಿಂದ ಮಹತ್ವದ್ದಾಗಿದೆ.
೪. ಕೊಂಟಿಗುಡಿ (ಕೊಂಟ ಅಥವಾ ತ್ರಿಶೂಲವನ್ನು ಸದಾ ಹೊಂದಿದವನೊಬ್ಬನು ವಾಸಿಸುತ್ತಿದ್ದ ಕಾರಣ ಈ ಹೆಸರು) ಎಂದು ಹೆಸರು ಪಡೆದ ದೇವಾಲಯದ ೪ ಕಂಭಗಳಿಗೆ ಆಧಾರವೇ ಇಲ್ಲ ;ಅವು ಅಡಿಯಿಂದ ಗುಂಡಾದ ಬೋದಿಗೆಯವರೆಗೆ ಚೌಕಾಕಾರವಾಗಿವೆ.
ಶಿರೋಲೇಖ | ಶಿರೋಲೇಖ | ಶಿರೋಲೇಖ |
---|---|---|
ಉದಾಹರಣೆ | ಉದಾಹರಣೆ | ಉದಾಹರಣೆ |
ಉದಾಹರಣೆ | ಉದಾಹರಣೆ | ಉದಾಹರಣೆ |
ಉದಾಹರಣೆ | ಉದಾಹರಣೆ | ಉದಾಹರಣೆ |