ಕನ್ನಡ ರಾಜ್ಯೋತ್ಸವ
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ.[3] ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ. ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ರಜಾದಿನವೆಂದು ಪಟ್ಟಿ ಮಾಡಲಾಗಿದೆ ಮತ್ತು ವಿಶ್ವದಾದ್ಯಂತ ಕನ್ನಡಿಗರು ಇದನ್ನು ಆಚರಿಸುತ್ತಾರೆ. ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.
ನಮ್ಮ ಕರ್ನಾಟಕ ರಾಜ್ಯೋತ್ಸವ Karnataka Rajyotsava | |
---|---|
![]() ರಾಜಯೋತ್ಸವದ ಭಾಗವಾಗಿ ಡೊಳ್ಳು ಕುಣಿತ ಸಾಂಪ್ರದಾಯಿಕ ನೃತ್ಯ | |
ಪರ್ಯಾಯ ಹೆಸರುಗಳು | ಕರ್ನಾಟಕ ರಾಜ್ಯೋತ್ಸವ, ಕರ್ನಾಟಕ ರಚನೆ ದಿನ |
ಆಚರಿಸಲಾಗುತ್ತದೆ | ಕನ್ನಡಿಗರು ಭಾರತದಲ್ಲಿ ವಿದೇಶಗಳಲ್ಲಿ [1] |
ರೀತಿ | State |
ಮಹತ್ವ | ಕರ್ನಾಟಕ ರಾಜ್ಯದ ದಕ್ಷಿಣ ಭಾರತದ ಕನ್ನಡ-ಮಾತನಾಡುವ ಪ್ರದೇಶಗಳ ಏಕೀಕರಣ |
ಆಚರಣೆಗಳು | ಕರ್ನಾಟಕ ಧ್ವಜಾರೋಹಣ , ಮೆರವಣಿಗೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ,ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ [2] |
ದಿನಾಂಕ | ನವೆಂಬರ್ ೧ |

ಕನ್ನಡ ಧ್ಜವ

ಆಟೋರಿಕ್ಷದ ಮೇಲೆ ಕನ್ನಡದ ಧ್ವಜ
ಇತಿಹಾಸ
- ಕನ್ನಡದ ಕುಲಪುರೋಹಿತರಾದ ಆಲೂರು ವೆಂಕಟರಾವ್, ಕರ್ನಾಟಕ ಏಕೀಕರಣ ಚಳುವಳಿಯನ್ನು ೧೯೦೫ ರಲ್ಲಿ ಪ್ರಾರಂಭಿಸಿದರು. ೧೯೫೦ರಲ್ಲಿ, ಭಾರತವು ಗಣರಾಜ್ಯವಾದ ನಂತರ ಭಾರತದ ವಿವಿಧ ಪ್ರಾಂತ್ಯಗಳು, ಭಾಷೆಗಳ ಆಧಾರದ ಮೇಲೆ ರಾಜ್ಯಗಳಾಗಿ ರೂಪ ಗೊಂಡವು. ಈ ಹಿಂದೆ ರಾಜರ ಆಳ್ವಿಕೆಯಲ್ಲಿ ದಕ್ಷಿಣ ಭಾರತದಲ್ಲಿ ಹಲವಾರು ಸಂಸ್ಥಾನಗಳನ್ನು ಒಳಗೊಂಡಂತೆ ರಾಜ್ಯಗಳು ರೂಪುಗೊಂಡಿದ್ದವು. ಕನ್ನಡ ಮಾತನಾಡುವ ಪ್ರಾಂತ್ಯಗಳು ಸೇರಿ, ಮೈಸೂರು ರಾಜ್ಯವು ಉದಯವಾಯಿತು.
- ೧೯೫೬ ರ ನವೆಂಬರ್ ೧ ರಂದು, ಮದ್ರಾಸ್, ಮುಂಬಯಿ, ಹೈದರಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು ಹಾಗೂ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೆಯ ಮೈಸೂರು ಎಂಬುದಾಗಿ ಹೊಸದಾಗಿ ರೂಪು ಗೊಂಡ ಮೈಸೂರು ರಾಜ್ಯವನ್ನು ಮೂರು ಪ್ರದೇಶಗಳಲ್ಲಿ ಗುರುತಿಸಲಾಯಿತು.
- ಹೊಸದಾಗಿ ಏಕೀಕೃತಗೊಂಡ ರಾಜ್ಯದ ಆರಂಭದಲ್ಲಿ ಹೊಸ ಘಟಕದ ಕೋರ್ ರೂಪುಗೊಂಡು ಮುಂಚಿನ ರಾಜ್ಯದ ಹೆಸರು ಇರಲೆಂದು "ಮೈಸೂರು" ಹೆಸರನ್ನು ಉಳಿಸಿಕೊಂಡರು. ಆದರೆ ಉತ್ತರ ಕರ್ನಾಟಕದ ಜನರ ತರ್ಕ ಮಾನ್ಯತೆಗಾಗಿ, ರಾಜ್ಯದ ಹೆಸರು ನವೆಂಬರ್ ೧, ೧೯೭೩ ರಂದು "ಕರ್ನಾಟಕ" ಎಂದು ಬದಲಾಯಿತು.
- ಈ ಸಂದರ್ಭದಲ್ಲಿ ದೇವರಾಜ ಅರಸ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಕರ್ನಾಟಕ ಏಕೀಕರಣದ ಮನ್ನಣೆ ಇತರ ವ್ಯಕ್ತಿಗಳಿಗೂ ಸೇರುತ್ತದೆ. ಅವರೆಂದರೆ ಅನಕೃ, ಕೆ. ಶಿವರಾಮ ಕಾರಂತ, ಕುವೆಂಪು, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಎ.ಎನ್.ಕೃಷ್ಣರಾವ್ ಮತ್ತು ಬಿ.ಎಂ.ಶ್ರೀಕಂಠಯ್ಯ
ಆಚರಣೆಗಳು
- ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯಾದ್ಯ೦ತ ಮಹದಾನ೦ದ ಮತ್ತು ಚಟುವಟಿಕೆಯಿಂದ ಆಚರಿಸಲಾಗುತ್ತದೆ. ಕೆಂಪು ಮತ್ತು ಹಳದಿ ಕನ್ನಡ ಧ್ವಜಗಳು ರಾಜ್ಯದ ಎಲ್ಲೆಡೆ ಹಾರಿಸಲ್ಪಡುತ್ತವೆ. ಕನ್ನಡ ನಾಡಗೀತೆ ("ಜಯ ಭಾರತ ಜನನಿಯ ತನುಜಾತೆ")ಯನ್ನು ಹಾಡಲಾಗುತ್ತದೆ. ಸರ್ಕಾರಿ ಕಚೇರಿ ಮತ್ತು ಹಲವಾರು ಪ್ರಮುಖ ಪ್ರದೇಶಗಳಲ್ಲಿ ವಾಹನಗಳ ಮೇಲೆ ಭುವನೇಶ್ವರಿ ಚಿತ್ರವನ್ನಿಟ್ಟು ಮೆರವಣಿಗೆ ನಡೆಸಲಾಗುತ್ತದೆ.
- ರಾಜ್ಯೋತ್ಸವವನ್ನು ಕರ್ನಾಟಕದಲ್ಲಿರುವ ಬಹುತೇಕ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಧರ್ಮಬೇಧವಿಲ್ಲದೆ ಆಚರಿಸುತ್ತಾರೆ ಹಾಗೂ ಸರ್ಕಾರ ಮೆರವಣಿಗೆ ಆಟೋ ರಿಕ್ಷಾಗಳು ಮತ್ತು ಇತರೆ ವಾಹನಗಳು ಕನ್ನಡ ಧ್ವಜದ ಬಣ್ಣಗಳಾದ ಕೆಂಪು ಮತ್ತು ಹಳದಿ ವರ್ಣಗಳ ಬಾವುಟ ದೊಂದಿಗೆ ಅಲಂಕರಿಸಲಾಗಿರುತ್ತವೆ. ರಾಜ್ಯ ಸರ್ಕಾರ ಕರ್ನಾಟಕ ರಾಜ್ಯೋತ್ಸವದ ದಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರಶಸ್ತಿ ಪ್ರಕಟ ಪಡಿಸಲಾಗುತ್ತದೆ.
- ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿಶ್ವದಾದ್ಯಂತ ಹಮ್ಮಿಕೊಳ್ಳಲಾಗುತ್ತದೆ. ರಾಜ್ಯದ ಮುಖ್ಯಮಂತ್ರಿ ಸಾಧಕರಿಗೆ ಈ ಪ್ರಶಸ್ತಿಯನ್ನು ವಿತರಿಸುತ್ತಾರೆ.
- ಭಾರತ ಇನ್ನಿತರ ಪ್ರದೇಶಗಳಾದ ಮುಂಬಯಿ, ದೆಹಲಿ ಮುಂತಾದ ಕಡೆಯು ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುತ್ತದೆ. ಇದಲ್ಲದೆ ಗುರಗಾಂವ್ ಮತ್ತು ಚೆನೈ, ಸಾಗರೋತ್ತರದಲ್ಲಿ ಕನ್ನಡ ಸಂಸ್ಥೆ, ಅಮೇರಿಕಾ, ಸಿಂಗಾಪುರ್, ದುಬೈ , ಮಸ್ಕಟ್, ದಕ್ಷಿಣ ಕೊರಿಯಾ , ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಮೊದಲಾದ ಕಡೆಗಳಲ್ಲಿ ನೆಲೆಸಿರುವ ಕನ್ನಡಿಗರು ಕರ್ನಾಟಕ ರಾಜ್ಯೋತ್ಸವ ಆಚರಿಸುತ್ತಾರೆ.
ಆಚರಣೆಯ ತಿಂಗಳು
ನವೆಂಬರ್ ೧ ರಂದು ಅಧಿಕೃತವಾಗಿ ರಾಜ್ಯೋತ್ಸವವು ಆಚರಣೆ. ನವಂಬರ್ ತಿಂಗಳ ಪೂರ್ತಿ ರಾಜ್ಯೋತ್ಸವವನ್ನು ಹಲವು ಕಡೆ ಆಚರಿಸಲಾಗುತ್ತದೆ. ನವೆಂಬರ್ ೧ ಕರ್ನಾಟಕದಲ್ಲಿ ಸಾರ್ವಜನಿಕ ರಜೆ ಇರುತ್ತದೆ. ಈ ದಿನಗಳಲ್ಲಿ ಕನ್ನಡ ಧ್ವಜ ಹಲವು ಕಡೆ ಹಾರಾಡುತ್ತಿರುತ್ತದೆ.
ಉಲ್ಲೇಖ
This article is issued from
Wikipedia.
The text is licensed under Creative
Commons - Attribution - Sharealike.
Additional terms may apply for the media files.