ಗೊರವನಹಳ್ಳಿ

ಗೊರವನಹಳ್ಳಿ ಇದು ಇದು ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನಲ್ಲಿ ಇರುವ ಒಂದು ಸಣ್ನ ಗ್ರಾಮ. ಇಲ್ಲಿ ಇರುವ ಲಕ್ಷ್ಮಿ ದೇವಸ್ಥಾನವು ಧಾರ್ಮಿಕ ಶ್ರದ್ದಾ ಕೇಂದ್ರವಾಗಿದೆ. ಈ ಗ್ರಾಮವು ತನ್ನಲ್ಲಿ ಇರುವ ಲಕ್ಷ್ಮಿ ದೇವಸ್ಥಾನದಿಂದಾಗಿ ಚಿರಪರಿಚಿತವಾಗಿದೆ. ಗ್ರಾಮದ ಕಮಲಮ್ಮ ಎಂಬುವವರು ಈ ದೇವಾಲಯವನ್ನು ನಿರ್ಮಿಸಿದರು ಹಾಗು ಅದರ ಉಸ್ತುವಾರಿ ವಹಿಸಿಕೊಂಡಿದ್ದರು. ಅವರ ಮರಣಾ ನಂತರ ಅವರ ಪುತ್ರರಾದ ಪ್ರಸನ್ನರವರು ಆಡಳಿತ ನೋಡಿಕೊಳ್ಳುತ್ತಿದ್ದಾರೆ. ಈ ದೇವಸ್ಥಾನದಲ್ಲಿ ಪ್ರತಿ ಮಂಗಳವಾರ, ಶುಕ್ರವಾರ ಹಾಗು ಭಾನುವಾರಗಳಂದು ವಿಶೇಷ ಪೂಜೆ ಇರುತ್ತದೆ. ದೇವಾಲಯದ ವತಿಯಿಂದ ಇಲ್ಲಿ ಪ್ರತಿದಿನ ಅಪರಾಹ್ನ ಊಟದ ವ್ಯವಸ್ಥೆ ಮಾಡಲಾಗಿದೆ. ದೇವಸ್ಥಾನದವರು ಇಲ್ಲಿ ಒಂದು ಕಲ್ಯಾಣ ಮಂಟಪವನ್ನು ನಿರ್ಮಿಸಿದ್ದಾರೆ. ಸಾರ್ವಜನಿಕರು ಅಗತ್ಯ ಹಣವನ್ನು ನೀಡಿ ಇದರ ಉಪಯೋಗ ಪಡೆದುಕೊಳ್ಳಬಹುದು.

ಇಲ್ಲಿ ನೀರಾವರಿ ಮತ್ತು ಮೀನುಗಾರಿಕೆಗೆ ಒಂದು ಸಣ್ಣ ಜಲಾಶಯವನ್ನು ನಿರ್ಮಿಸಲಾಗಿದೆ. ಮಳೆ ಮತ್ತು ಅಕ್ಕಿ ರಾಂಪುರ ಕೆರೆಯ ಎಚ್ಚುವರಿ ನೀರು ಗೊರವನಹಳ್ಳಿ ಕೆರೆಗೆ ಆಧಾರ. ಈ ಕೆರೆಯು ನೂರಾರು ಎಕರೆ ಗದ್ದೆ ಹಾಗು ತೋಟಗಳಿಗೆ ನೀರಾವರಿಯ ಅಧಾರವಾಗಿದೆ.

ಗೋರವನಹಳ್ಳಿ ದೇವಾಲಯದ ಪಕ್ಕದ‌ ಊರಿನಲ್ಲಿ ಇರುವ ಇನ್ನೊಂದು ಐತಿಹಾಸಿಕ ಹಿನ್ನೆಲೆ ಇರುವ ದೇಗುಲ ಶ್ರೀ ಕ್ಷೇತ್ರ ಕೋಡ್ಲಹಳ್ಳಿ ಜಗನ್ಮಾತೆ ಉದ್ಬವ ಮಾರಮ್ಮ ನವರೂ, ಸಾಕ್ಷಾತ್ ಪಾರ್ವತಮ್ಮ ನವರ ಸ್ವರೂಪ, ಮಹಾಲಕ್ಷ್ಮಿ ಮಹಾಸರಸ್ವತಿ ಮಹಾಕಾಳಿ ಯಾಗಿ ನೆಲೆನಿಂತಿರುವ ಐತಿಹಾಸಿಕ ಪುರಾಣ ಪ್ರಸಿದ್ಧವಾದ ಪುಣ್ಯಕ್ಷೇತ್ರ ಸ್ಥಳ , ಕೋಡ್ಲಹಳ್ಳಿ, ಕ್ಯಾಮೆನಹಳ್ಳಿ ಗ್ರಾಮ ಪಂಚಾಯತಿ, ಹೊಳವನಹಳ್ಳಿ‌ ಹೋಬಳಿ, ಕೊರಟಗೆರೆ ತಾಲ್ಲೂಕು, ತುಮಕೂರು ಜಿಲ್ಲೆ ಕರ್ನಾಟಕ ರಾಜ್ಯ

ಗೊರವನಹಳ್ಳಿ ಲಕ್ಷ್ಮಿ ದೇವಸ್ಥಾನದಗೋಪುರ
ಗೊರವನಹಳ್ಳಿ ಲಕ್ಷ್ಮಿ ದೇವಸ್ಥಾನ
This article is issued from Wikipedia. The text is licensed under Creative Commons - Attribution - Sharealike. Additional terms may apply for the media files.