ಭೀಮಪ್ಪ ಎಲ್ಲಪ್ಪ ಚೌಧರಿ
ಭೀಮಪ್ಪ ಎಲ್ಲಪ್ಪ ಚೌಧರಿಯವರು ಮಾಜಿ ಸಂಸದರು ಹಾಗೂ ರಾಜಕೀಯ ಧುರೀಣರು.
ಭೀಮಪ್ಪ ಎಲ್ಲಪ್ಪ ಚೌಧರಿ | |
---|---|
ಜನನ | 1ನೇ ಜೂನ್, 1926 ದೇವಣಗಾಂವ, ಸಿಂದಗಿ ತಾಲ್ಲೂಕು, ವಿಜಯಪುರ ಜಿಲ್ಲೆ, ಕರ್ನಾಟಕ |
ವೃತ್ತಿ | ರಾಜಕೀಯ |
ರಾಷ್ಟ್ರೀಯತೆ | ಭಾರತೀಯ |
ಜನನ
ಚೌಧರಿಯವರು 1ನೇ ಜೂನ್, 1926ರಂದು ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ದೇವಣಗಾಂವ ಗ್ರಾಮದಲ್ಲಿ ಜನಿಸಿದರು.
ಶಿಕ್ಷಣ
ಸೊಲ್ಲಾಪುರದ D.A.V.ಕಾಲೇಜಿನಿಂದ ಬಿ.ಎ. ಪದವಿ ಪಡೆದಿದ್ದಾರೆ.
ನಿರ್ವಹಿಸಿದ ಖಾತೆಗಳು
- 1971ರಲ್ಲಿ ನಡೆದ ಲೋಕಸಭೆ 5ನೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ವಿಜಯಪುರ ಲೋಕಸಭಾ ಕ್ಷೇತ್ರದ ಸಂಸದರಾಗಿ ಮೊದಲ ಬಾರಿ ಸಂಸತ್ ಪ್ರವೇಶಿಸಿದ್ದರು.
- ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕೆ.ಪಿ.ಸಿ.ಸಿ. ಸದಸ್ಯರಾಗಿದ್ದರು.
- ವಿಜಯಪುರ ಜಿಲ್ಲೆಯ ಹಿರಿಯ ನ್ಯಾಯವಾದಿಗಳಾಗಿದ್ದರು.[1]
ಉಲ್ಲೇಖಗಳು
This article is issued from
Wikipedia.
The text is licensed under Creative
Commons - Attribution - Sharealike.
Additional terms may apply for the media files.