ಮಕ್ಕಳ ದಿನಾಚರಣೆ
ವಿಶ್ವದಾದ್ಯಂತ ಮಕ್ಕಳ ದಿನಾಚರಣೆಯನ್ನು ನವೆಂಬರ್ ೨೦ರಂದು ಆಚರಿಸುತ್ತಾರೆ.[1] ಭಾರತದಲ್ಲಿ ಜವಾಹರ್‌ಲಾಲ್ ನೆಹರುರವರ ಹುಟ್ಟುಹಬ್ಬದಂದು (ನವೆಂಬರ್ ೧೪ರಂದು) ಆಚರಿಸಲಾಗುತ್ತದೆ.
ಮಕ್ಕಳ ದಿನಾಚರಣೆ | |
---|---|
![]() ಮಕ್ಕಳ ದಿನಾಚರಣೆಯ ವಿಕಿಪೀಡಿಯ ಲಾಂಛನ | |
Observed by | ವಿವಿಧ ರಾಷ್ಟ್ರಗಳು |
Frequency | ವಾರ್ಷಿಕ |
Related to | ತಾಯಂದಿರ ದಿನ |
2010-06-01
ಮಕ್ಕಳ ದಿನಾಚರಣೆ’ಯ ಹುಟ್ಟು
- ವಿ.ಎನ್. ಕುಲಕರ್ಣಿ ಎನ್ನುವವರು 1951ರಲ್ಲಿ ವಿಶ್ವಸಂಸ್ಥೆಯ ಒಂದು ಯೋಜನೆಯಡಿಯಲ್ಲಿ ಇಂಗ್ಲೆಂಡಿನ ಮಕ್ಕಳ ಕಲ್ಯಾಣಕ್ಕಾಗಿ ದುಡಿಯುತ್ತಿದ್ದರು. ಆ ದಿನಗಳಲ್ಲಿ ಬಡ ಮಕ್ಕಳ ಅಭಿವೃದ್ಧಿಗಾಗಿ ನಿಧಿ ಸಂಗ್ರಹಕ್ಕೆ ರಾಣಿ ಎಲಿಜ಼ಬೆತ್-2 ಅವರ ಜನ್ಮದಿನವನ್ನು, ‘ಧ್ವಜ ದಿನಾಚರಣೆ’ಯನ್ನಾಗಿ ಆಚರಿಸುತ್ತಾ ಧನ ಸಂಗ್ರಹಿಸಲಾಗುತ್ತಿತ್ತು. ಆ ಸಂದರ್ಭದಲ್ಲಿ ಕುಲಕರ್ಣಿಯವರ ಮನಸ್ಸು ಸಹಜವಾಗಿಯೇ ಭಾರತೀಯ ಮಕ್ಕಳ ಸ್ಥಿತಿಗತಿಯ ಬಗ್ಗೆ ಮಿಡಿದಿತ್ತು.
- ಇಂತಹದೊಂದು ಯೋಜನೆ ಭಾರತದಲ್ಲೂ ನಡೆಯಬೇಕು; ಮಕ್ಕಳಿಗಾಗಿ ಧನ ಸಂಗ್ರಹಿಸಿ ವಿಶೇಷ ಕಾರ್ಯಕ್ರಮಗಳನ್ನು ನಡೆಸಬೇಕು ಎನ್ನುವ ಬಗ್ಗೆ ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪವಿಟ್ಟರು. ಇದಕ್ಕೆ ಭಾರತದ ಮೊದಲ ಪ್ರಧಾನಮಂತ್ರಿಯಾಗಿದ್ದ ಚಾಚಾ ನೆಹರೂ ಅವರ ಜನ್ಮದಿನದಷ್ಟು ಪ್ರಶಸ್ತವಾದ ದಿನ ಬೇರೊಂದಿಲ್ಲ ಎನ್ನುವ ಅಭಿಪ್ರಾಯವನ್ನೂ ಮುಂದಿಟ್ಟರು. ಪಂಡಿತ್ ನೆಹರೂ ಇದಕ್ಕೆ ಒಪ್ಪಿಯಾರೇ? ಎನ್ನುವ ಆತಂಕ ಎಲ್ಲರನ್ನೂ ಕಾಡುತ್ತಿತ್ತು.
- ಆದರೆ ಚಾಚಾ ನೆಹರೂ ಅವರಿಗೆ ಮಕ್ಕಳ ಮೇಲಿನ ಮಮತೆ ಎಷ್ಟಿತ್ತೆಂದರೆ ಅವರು ಮಕ್ಕಳಿಗಾಗಿ ಏನು ಮಾಡಲೂ ಸಿದ್ಧವಿದ್ದರು. ಮುಜುಗರ ಬದಿಗಿಟ್ಟು ಅತ್ಯಂತ ಸಂತೋಷದಿಂದ ತಮ್ಮ ಜನ್ಮದಿನವನ್ನು ‘ಮಕ್ಕಳ ದಿನಾಚರಣೆ’ಯೆಂದು ಆಚರಿಸಲು ಒಪ್ಪಿಕೊಂಡರು. ಈ ರೀತಿ 1951ರಲ್ಲಿ ನವೆಂಬರ್ 14ರಂದು ಭಾರತದಲ್ಲಿ ‘ಮಕ್ಕಳ ದಿನಾಚರಣೆ’ ಆರಂಭವಾಯಿತು.
- ಮಕ್ಕಳ ಹಕ್ಕು, ಹಿತರಕ್ಷಣೆ ಮತ್ತು ಯೋಗಕ್ಷೇಮದ ಉದ್ದೇಶದೊಂದಿಗೆ ಜಗತ್ತಿನಾದ್ಯಂತ ಮಕ್ಕಳ ದಿನಾಚರಣೆಯನ್ನು ಬೇರೆ ಬೇರೆ ದಿನಾಂಕಗಳಂದು ಆಚರಿಸುತ್ತಿದ್ದಾರೆ. ನವೆಂಬರ್ 20ರಂದು ‘ಯುನಿವರ್ಸಲ್ ಚಿಲ್ಡ್ರನ್ಸ್ ಡೇ’ ಎಂದಾದರೆ, ಜೂನ್ 1ರಂದು ‘ಇಂಟರ್ ನ್ಯಾಷನಲ್ ಚಿಲ್ಡ್ರನ್ಸ್ ಡೇ’ ಆಚರಣೆಯಲ್ಲಿದೆ. ಇಂದು ಬಹಳಷ್ಟು ದೇಶಗಳು, ತಮ್ಮ ಮಕ್ಕಳಪ್ರೇಮಿ ರಾಷ್ಟ್ರನಾಯಕರೊಬ್ಬರ ಜನ್ಮದಿನವನ್ನು ‘ಮಕ್ಕಳ ದಿನಾಚರಣೆ’ ರೂಪದಲ್ಲಿ ಆಚರಿಸುತ್ತಿವೆ.BB
ಹಿನ್ನೆಲೆ
ಜವಾಹರ್ಲಾಲ್ ನೆಹರುವರಿಗೆ ಮಕ್ಕಳೆಂದರೆ ಬಹಳ ಇಷ್ಟ.ಅವರು ಅನಾಥ ಮಕ್ಕಳು ಕೊಟ್ಟ ಗುಲಾಬಿಯನ್ನು ತಮ್ಮ ಕೋಟಿನ ಜೇಬಿಗೆ ಅಂಟಿಸಿ ಸಂತೋಷ ಪಡುತ್ತಿದ್ದರಂತೆ. ಮಕ್ಕಳ ಮೇಲಿದ್ದ ಇವರ ಅಕ್ಕರೆ, ಪ್ರೀತಿಯ ಸಂಕೇತವಾಗಿ ದೇಶದಾದ್ಯಂತ ಈ ದಿನದಂದು ಶಾಲೆಗಳಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಗುತ್ತದೆ. ಇವರು ಪ್ರಧಾನಿಯಾಗಿದ್ದ ಸಮಯದಲ್ಲಿ ಮಕ್ಕಳ ಅಭಿವೃದ್ಧಿಗೆ ಬಹಳಷ್ಟು ಶ್ರಮಿಸಿದ್ದರಂತೆ. ಇಂದಿನ ಮಕ್ಕಳೇ ಮುಂದಿನ ಜನಾಂಗ.
ಆಚರಣೆ
ಸಾಧಾರಣವಾಗಿ ಹಾಡು, ಆಟಗಳನ್ನು ಕೂಡಿದ ಕೆಲವು ಘಂಟೆಗಳ ಬಳಿಕ ರಜೆ ಘೋಷಿಸಲಾಗುತ್ತದೆ. ಮಕ್ಕಳ ದಿನಾಚರಣೆಯಂದು ವಿವಿಧೆಡೆ ಕಲಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಚಿತ್ರಕಲೆ ಸ್ಪರ್ಧೆಗಳು ಪ್ರಮುಖ.
This article is issued from
Wikipedia.
The text is licensed under Creative
Commons - Attribution - Sharealike.
Additional terms may apply for the media files.