ರಾಜ್ಯೋತ್ಸವ ಪ್ರಶಸ್ತಿ

ರಾಜ್ಯೋತ್ಸವ ಪ್ರಶಸ್ತಿ ಕರ್ನಾಟಕ ಸರ್ಕಾರದ ವತಿಯಿಂದ ನೀಡಲಾಗುವ ಅತ್ಯುನ್ನತ ನಾಗರಿಕ ಪ್ರಶಸ್ತಿ. ವಿವಿಧ ಕ್ಷೇತ್ರಗಳ ಗಣ್ಯರನ್ನು ಆಯ್ದು ಅವರಿಗೆ ಪ್ರಶಸ್ತಿ ನೀಡಲಾಗುತ್ತದೆ.

ರಾಜ್ಯೋತ್ಸವ ಪ್ರಶಸ್ತಿ
ಪ್ರಶಸ್ತಿಯ ವಿವರ
ಮಾದರಿ ಸಾರ್ವಜನಿಕ
ಪ್ರಾರಂಭವಾದದ್ದು ೧೯೬೬
ಮೊದಲ ಪ್ರಶಸ್ತಿ ೧೯೬೬
ಕಡೆಯ ಪ್ರಶಸ್ತಿ ೨೦೧೯
ಪ್ರಶಸ್ತಿ ನೀಡುವವರು ಕರ್ನಾಟಕ ಸರ್ಕಾರ
ಧನ ಪುರಸ್ಕಾರ ೧,೦೦,೦೦೦
ವಿವರ ವಿವಿಧ ಕ್ಷೇತ್ರಗಳ ಸಾಧಕರಿಗೆ ಕರ್ನಾಟಕ ರಾಜ್ಯ ಸರ್ಕಾರ ನೀಡುವ ಉನ್ನತ ಗೌರವ
ಹಿಂದಿನ ಹೆಸರು(ಗಳು) ಮೈಸೂರು ರಾಜ್ಯ ಪ್ರಶಸ್ತಿ
(೧೯೬೬–೧೯೭೨)
ಪ್ರಶಸ್ತಿಯ ಶ್ರೇಣಿ
ಕರ್ನಾಟಕ ರತ್ನರಾಜ್ಯೋತ್ಸವ ಪ್ರಶಸ್ತಿ

ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರತಿ ವರ್ಷ ನವೆಂಬರ್ ೧ರಂದು ಬೆಂಗಳೂರಿನಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳು ಪ್ರದಾನ ಮಾಡುತ್ತಾರೆ. ಪ್ರಶಸ್ತಿಯು ಒಂದು ಲಕ್ಷ ರೂಪಾಯಿಯ ಗೌರವಧನ, ೨೫ಗ್ರಾಂ ಚಿನ್ನದ ಪದಕ, ಶಾಲು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ. ಇದಲ್ಲದೆ ಅರ್ಹ ಪುರಸ್ಕೃತರಿಗೆ ಸರಕಾರದ ವತಿಯಿಂದ ನಿವೇಶನಗಳನ್ನು ನೀಡುವ ಕ್ರಮವೂ ಜಾರಿಯಲ್ಲಿದೆ. ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಹಿಂದಿನ ದಿನ ಅಂದರೆ ಅಕ್ಟೋಬರ್ ೩೧ರ ಸಂಜೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಪ್ರಕಟಿಸುತ್ತಾರೆ.[1]

ಇತಿಹಾಸ

ರಾಜ್ಯೋತ್ಸವ ಪ್ರಶಸ್ತಿಯನ್ನು ೧೯೬೬ರಿಂದ ಕೊಡಲು ಪ್ರಾರಂಭಿಸಲಾಯಿತು. ಸಾಮಾನ್ಯವಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯನ್ನು ಈ ಕೆಳಗಿನ ವಿಭಾಗಗಳಲ್ಲಿ ಸಾಧನೆಗೈದ ಸಾಧಕರಿಗೆ ಕೊಡಲಾಗುತ್ತದೆ:

ಕಲೆ, ಸಾಹಿತ್ಯ, ರಂಗಭೂಮಿ, ಸಿನಿಮಾ, ಸಂಗೀತ, ನೃತ್ಯ, ಜಾನಪದ, ಯಕ್ಷಗಾನ, ಬಯಲಾಟ, ಶಿಲ್ಪಕಲೆ, ಚಿತ್ರಕಲೆ, ಸಮಾಜಸೇವೆ, ಸಂಕೀರ್ಣ, ಪತ್ರಿಕೋದ್ಯಮ / ಮಾಧ್ಯಮ, ಕ್ರೀಡೆ, ವೈದ್ಯಕೀಯ, ಶಿಕ್ಷಣ, ಕೃಷಿ, ವಿಜ್ಞಾನ ಮತ್ತು ತಂತ್ರಜ್ಞಾನ.

ಹಲವಾರು ಕಾರಣಗಳಿಂದಾಗಿ ರಾಜ್ಯೋತ್ಸವ ಪ್ರಶಸ್ತಿಯನ್ನು ಕೆಲವು ವರ್ಷಗಳಲ್ಲಿ ಪ್ರದಾನ ಮಾಡಲಿಲ್ಲ[2]. ೧೯೯೨ರಲ್ಲಿ ಎಸ್. ಬಂಗಾರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ೧೭೨ ಜನರಿಗೆ ಪ್ರಶಸ್ತಿ ನೀಡಿದ್ದು ಒಂದು ದಾಖಲೆಯಾಗಿತ್ತು. ಆದರೆ ೨೦೦೫ರಲ್ಲಿ ಎನ್. ಧರ್ಮಸಿಂಗ್ ಅವರ ಸರ್ಕಾರ ೧೭೫ ಜನಕ್ಕೆ ಪ್ರಶಸ್ತಿ ನೀಡಿದ್ದು ಈವರೆಗಿನ ದಾಖಲೆಯಾಗಿ ಉಳಿದಿದೆ. ೧೯೮೫ರ ವರ್ಷ ವಿಶ್ವ ಕನ್ನಡ ಸಮ್ಮೇಳನದ ಅಂಗವಾಗಿ ಮೈಸೂರಿನಲ್ಲಿ ಮತ್ತು ೨೦೦೮ರಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭಗಳು ನಡೆದಿವೆ.

ದಶಕವಾರು ಪ್ರಶಸ್ತಿಗಳ ಪಟ್ಟಿ

ನೋಡಿ

ಉಲ್ಲೇಖಗಳು

  1. "1,000 applications received". Online webpage of The Hindu. The Hindu. Retrieved 2007-07-08.
  2. "Rajyotsava Award turns 50". The Hindu. 30 October 2017. Retrieved 3 November 2017.
This article is issued from Wikipedia. The text is licensed under Creative Commons - Attribution - Sharealike. Additional terms may apply for the media files.