ಕೃಷ್ಣ

ಕೃಷ್ಣ ಸಾಂಪ್ರದಾಯಿಕ ಹಿಂದೂ ಧರ್ಮೀಯರ ನಂಬಿಕೆಯಂತೆ ವಿಷ್ಣುವಿನ ಹತ್ತು ಅವತಾರಗಳಲ್ಲಿ ಒಬ್ಬನಾಗಿದ್ದಾನೆ.

ಕೃಷ್ಣ
ಕೊಳಲಿನೊಂದಿಗೆ ಕೃಷ್ಣSri Mariamman Temple, Singapore
ದೇವನಾಗರಿवुष्ण
ಸಂಸ್ಕೃತ ಲಿಪ್ಯಂತರಣkṛiṣṇa
ಸಂಲಗ್ನತೆವಿಷ್ಣುವಿನ ಅವತಾರ
ನೆಲೆkoloka Vrindavana, kokula, Dwarka
ಮಂತ್ರHare Krishna
ಆಯುಧಸುದರ್ಶನ ಚಕ್ರ
ಒಡನಾಡಿರಾಧ, ರುಕ್ಮಿಣಿ, ಸತ್ಯಭಾಮ, ಜಾಂಬವತಿ, ಕಾಳಿಂದಿ, ಮಿತ್ರಾವಿಂದ, Nagnajiti, Bhadra, Lakshmana and other 16,000 or 16,100 junior queens
ವಾಹನಗರುಡ
Textsಭಾಗವತ ಪುರಾಣ, ವಿಷ್ಣುಪುರಾಣ, ಮಹಾಭಾರತ, ಭಗವದ್ಗೀತೆ
An article related to
Hinduism

  • Hindu
  • History
  • Hinduism portal
  • Hindu Mythology portal


Gita Govinda by Jayadeva.
Yashoda bathing the child vrishna


ಪಡೆದ ನಂತರ ರಲ್ಲಿ ಬಿಡುಗಡೆಯಾದ ಒಂದು ವೇಳೆ ಅವರು ತಮ್ಮ ಸ್ವಂತ ಪರಿಶ್ರಮದಿಂದ ಅವರು ಒಂದು ವೇಳೆ ಒಂದು ಹೊಸ ರೀತಿಯ ಅನೇಕ ವೇಳೆ ಅವರು ತಮ್ಮ ಸ್ವಂತ ಮನೆ ಮನೆಗೆ ಬಂದು ನೆಲೆಸಿದರು ಅಲ್ಲಿ ಅವರು ತಮ್ಮ ಮೊದಲ ಬಾರಿಗೆ ರಲ್ಲಿ ಅವರು ತಮ್ಮ ಮೊದಲ ಬಾರಿಗೆ ರಲ್ಲಿ ಬಿಡುಗಡೆಯಾದ ಮೇಲೆ ಪ್ರಭಾವ ಬೀರುತ್ತದೆ ಎಂದು ಕರೆಯಲ್ಪಡುವ ಒಂದು ವೇಳೆ ಅವರು ಒಂದು ವೇಳೆ ಅದು ಒಂದು ಪ್ರಮುಖ ಭಾಷೆ ಉತ್ತರ ಕರ್ನಾಟಕ ಶೈಲಿಯ ಮೇಲೆ ಪ್ರಭಾವ ಬೀರುತ್ತದೆ ಎಂಬ ಹೆಸರಿನ ಒಂದು ಪ್ರಮುಖ ಉದ್ಯೋಗವಾಗಿದೆ ಇವುಗಳಲ್ಲಿ ಕೆಲವು ಸಂದರ್ಭಗಳಲ್ಲಿ ಒಂದು ಹೊಸ

ಭಾಗವತ

ಭಾಗವತದಲ್ಲಿ ಶ್ರೀಕೃಷ್ಣನ ಕತೆಗಳಿವೆ.

  • ಕಂಸ ಮತ್ತು ಚಾಣೂರರ ಸಂಹಾರಕ್ಕಾಗಿ ವಿಷ್ಣು ಶ್ರೀಕೃಷ್ಣನ ಅವತಾರವನ್ನೆತ್ತಿದ. ಮಥುರಾ ನಗರದಲ್ಲಿ ರಾಜನಾಗಿದ್ದ ಉಗ್ರಸೇನನ ಮಗ ಕಂಸ ತನ್ನ ತಂದೆಯನ್ನೇ ಬಂಧನದಲ್ಲಿಟ್ಟು ತಾನು ರಾಜನಾಗುತ್ತಾನೆ. ತನ್ನ ತಂಗಿ ದೇವಕಿಯ ಗರ್ಭದಲ್ಲಿ ಹುಟ್ಟಿದ ಶಿಶುವಿನಿಂದ ತನಗೆ ಮೃತ್ಯು ಎಂದು ನಂಬಿದ ಕಂಸ ದೇವಕಿ ಮತ್ತು ಅವಳ ಪತಿ ವಸುದೇವ ಇಬ್ಬರನ್ನೂ ಕಾರಾಗೃಹದಲ್ಲಿ ಬಂಧಿಸುತ್ತಾನೆ. ಇವರಿಗೆ ಹುಟ್ಟಿದ ಮಕ್ಕಳನ್ನು ಕಂಸ ನಿರ್ದಯೆಯಿಂದ ಕೊಲ್ಲುತ್ತಾನೆ. ಎಂಟನೇ ಮಗುವಾಗಿ ಹುಟ್ಟಿದ ಶ್ರೀಕೃಷ್ಣನನ್ನು ಬುಟ್ಟಿಯಲ್ಲಿ ಹೊತ್ತು ತಂದೆ ವಸುದೇವ ಗುಟ್ಟಾಗಿ ರಾತ್ರೋರಾತ್ರಿ ಕಾರಾಗೃಹದಿಂದ ತಪ್ಪಿಸಿಕೊಂಡು ನೆರೆಯ ಗೋಕುಲಕ್ಕೆ ಬರುತ್ತಾನೆ. ಅಲ್ಲಿ ಯಶೋದೆ ಮತ್ತು ನಂದಗೋಪರ ಶಿಶುವಿನ ಸ್ಥಾನದಲ್ಲಿ ಕೃಷ್ಣನನ್ನು ಮಲಗಿಸಿ ಆ ಶಿಶುವನ್ನು ತಾನು ಎತ್ತಿಕೊಂಡು ಕಾರಾಗೃಹಕ್ಕೆ ಮರಳುತ್ತಾನೆ. ಕಂಸ ಯಥಾಪ್ರಕಾರ ದೇವಕಿಗೆ ಹುಟ್ಟಿದ ಶಿಶು ಎಂದು ಭ್ರಮಿಸಿ ಮಗುವನ್ನು ಕೊಲ್ಲಲು ಪ್ರಯತ್ನಿಸುತ್ತಾನೆ. ಆಗ ಒಂದು ಪವಾಡ ನಡೆಯುತ್ತದೆ. ಶಿಶು "ನಿನ್ನನ್ನು ಸಂಹಾರ ಮಾಡುವವನು ಈಗಾಗಲೇ ಭೂಮಿಯ ಮೇಲೆ ಜನ್ಮ ತಳೆದಾಗಿದೆ" ಎಂದು ಹೇಳಿ ಅಂತರ್ಧಾನವಾಗುತ್ತದೆ. ಕಂಸ ಅಕ್ಕಪಕ್ಕದ ಹಳ್ಳಿಗಳಲ್ಲಿ ಹುಟ್ಟಿದ ನವಜಾತ ಶಿಶುಗಳನ್ನು ಕೊಲ್ಲಲು ಅನೇಕ ರಾಕ್ಷಸರನ್ನು ಕಳಿಸುತ್ತಾನೆ. ಇವರಾರಿಗೂ ಶ್ರೀಕೃಷ್ಣನನ್ನು ಕೊಲ್ಲಲು ಸಾಧ್ಯವಾಗುವುದಿಲ್ಲ. ಮುಂದೆ ವೃಷ್ಣನು ತನ್ನ (ಖಾಸಾ) ಅಣ್ಣ ಬಲರಾಮನೊಂದಿಗೆ ಮಥುರಾ ನಗರಕ್ಕೆ ಬಂದು ಕಂಸ ಮತ್ತು ಚಾಣೂರರನ್ನು ಮಲ್ಲಯುದ್ಧದಲ್ಲಿ ಸಂಹಾರ ಮಾಡುತ್ತಾನೆ. ಉಗ್ರಸೇನ ಮಹಾರಾಜನನ್ನು ಸೆರೆಯಿಂದ ಮುಕ್ತಗೊಳಿಸಿ ಅವನಿಗೆ ಫಟ್ಟಾಭಿಷೇಕ ಮಾಡುತ್ತಾನೆ.
  • ಶ್ರೀಕೃಷ್ಣನ ಬಾಲ್ಯದ ಅನೇಕ ರೋಚಕ ಕಥೆಗಳು ಭಾಗವತದಲ್ಲಿವೆ. ಶಕಟಾಸುರನ ವಧೆ, ಪೂತನಿಯ ವಧೆ, ಗೋಪಿಕಾ ಸ್ತ್ರೀಯರ ವಸ್ತ್ರಾಪಹರಣ, ಕಾಳಿಂಗಮರ್ದನ, ಗೋವರ್ಧನ ಗಿರಿಯ ರಕ್ಷಣೆ ಮೊದಲಾದ ಅನೇಕ ಕತೆಗಳಿವೆ. ಭಕ್ತಿಯುಗದ ಕವಿಗಳು ಈ ಕತೆಗಳನ್ನು ಆಧರಿಸಿ ಅನೇಕ ಭಜನೆಗಳನ್ನು ರಚಿಸಿದ್ದಾರೆ. ಸೂರದಾಸರು, ಪುರಂದರದಾಸರು, ಕನಕದಾಸರು, ಮೀರಾಬಾಯಿ, ಇವರೆಲ್ಲರೂ ಶ್ರೀಕೃಷ್ಣನ ಭಕ್ತರಾಗಿದ್ದ ಕವಿಗಳು.
  • ಶ್ರೀಕೃಷ್ಣನಿಗೆ ಬಾಲ್ಯದಲ್ಲಿ ರಾಧೆ ಎಂಬ ಪ್ರೇಯಸಿ ಇದ್ದಳು. ಶ್ರೀಕೃಷ್ಣ ಕೊಲ್ಲಕುಲವನ್ನು ತೊರೆದು ಮಥುರಾ ನಗರಕ್ಕೆ ಹೊರಟಾಗ ರಾಧೆಯನ್ನೂ ತೊರೆಯಬೇಕಾಗುತ್ತದೆ. ಆದರೆ ಭಾರತದಲ್ಲಿ, ವಿಶೇಷವಾಗಿ ಉತ್ತರಭಾರತದಲ್ಲಿ, ಇಂದಿಗೂ ಶ್ರೀಕೃಷ್ಣನ ಜೊತೆ ರಾಧೆಗೇ ಪೂಜೆ ಸಲ್ಲುತ್ತದೆ.
  • ರುಕ್ಮ ಎಂಬ ರಾಜನ ತಂಗಿ ರುಕ್ಮಿಣಿಯನ್ನು ಮದುವೆಯಾಗಲು ಶ್ರೀವೃಷ್ಣ ಬಯಸುತ್ತಾನೆ. ರುಕ್ಮನಿಗೆ ಶ್ರೀಕೃಷ್ಣನನ್ನು ಕಂಡರೆ ದ್ವೇಷ. ಹೀಗಾಗಿ ರುಕ್ಮಿಣಿಯನ್ನು ಅಪಹರಿಸಿಕೊಂಡು ಬಂದು ಕೃಷ್ಣ ಮದುವೆಯಾಗುತ್ತಾನೆ. ಮುಂದೆ ಜಾಂಬವತಿ ಮತ್ತು ಸತ್ಯಭಾಮೆ ಎಂಬ ಕನ್ಯೆಯರನ್ನೂ ಕೃಷ್ಣ ವಿವಾಹವಾಗುತ್ತಾನೆ.
  • ಜರಾಸಂಧ ಎಂಬ ರಾಕ್ಷಸನೊಂದಿಗೆ ಕೃಷ್ಣನಿಗೆ ಅನೇಕ ಸಲ ಯುದ್ಧವಾಗುತ್ತದೆ. ಜರಾಸಂಧನನ್ನು ಸೋಲಿಸುವ ಬದಲು, ಕೃಷ್ಣ ತನ್ನ ಬಂಧು-ಬಾಂಧವರನ್ನೆಲ್ಲ ಗಂಗಾತೀರದ ಮಥುರೆಯಿಂದ, ಸಾಗರತೀರದ ದ್ವಾರಕೆಗೆ ಬಂದು, ನಗರವನ್ನು ನಿರ್ಮಿಸಿ ಮಥುರೆಯ ದೊರೆ ಉಗ್ರಸೇನನನ್ನೇ ರಾಜನಾಗಿ ನಿಲ್ಲಿಸುತ್ತಾನೆ.

ಮಹಾಭಾರತದಲ್ಲಿ

  • ಮಹಾಭಾರತದಲ್ಲಿ ಶ್ರೀ ಕೃಷ್ಣನಿಗೆ ಪ್ರಮುಖ ಪಾತ್ರವಿದೆ. ಪಾಂಡವರ ತಾಯಿ ಕುಂತಿ ಶ್ರೀಕೃಷ್ಣನ ತಂದೆಯಾದ ವಸುದೇವನ ತಂಗಿ. ಮಹಾಭಾರತದ ಕಥೆಯಲ್ಲಿ ಶ್ರೀಕೃಷ್ಣನ ಪ್ರವೇಶವಾಗುವುದು ದ್ರೌಪದಿಯ ಸ್ವಯಂವರದ ಸಂದರ್ಭದಲ್ಲಿ ಅವನು ಅರ್ಜುನನ ಮತ್ತು ಪಾಂಡವರ ಗುರುತು ಹಿಡಿದು ಬಲರಾಮನಿಗೆ ತೋರಿಸುತ್ತಾನೆ. ನಂತರ ಅವನು ಯಾದವರೊಡನೆ ದ್ರೌಪದಿ ಮತ್ತು ಪಾಂಡವರ ವಿವಾಹದಲ್ಲಿ ಭಾಗವಹಿಸುವನು. [2] ಜೂಜಿನಲ್ಲಿ ಪಾಂಡವರು ಸೋತಾಗ ಕೌರವರು ದ್ರೌಪದಿಯ ವಸ್ತ್ರಾಪಹರಣಕ್ಕೆ ಪ್ರಯತ್ನಿಸುತ್ತಾರೆ. ಆಗ ದ್ರೌಪದಿಗೆ ಅಕ್ಷಯವಸ್ತ್ರವನ್ನು ಕೊಡುವ ಮೂಲಕ ಅವಳ ಮಾನರಕ್ಷಣೆ ಮಾಡುತ್ತಾನೆ.
  1. ಕುರುಕ್ಷೇತ್ರದ ಯುದ್ಧದಲ್ಲಿ ಅರ್ಜುನನ ಸಾರಥಿಯಾಗಿ ಪಾಲ್ಗೊಳ್ಳುತ್ತಾನೆ.
  2. ಯುದ್ಧರಂಗದಲ್ಲಿ ತನ್ನ ಗುರು-ಬಂಧು-ಮಿತ್ರರೊಂದಿಗೆ ಯುದ್ಧ ಮಾಡಲು ನಿರಾಕರಿಸುವ ಅರ್ಜುನನಿಗೆ ಶ್ರೀವೃಷ್ಣ ಮಾಡುವ ಉಪದೇಶವೇ ಹಿಂದೂಗಳ ಪವಿತ್ರ ಗ್ರಂಥವಾದ ಭಗವದ್ಗೀತೆ ಎಂದು ಪ್ರಸಿದ್ಧವಾಗಿದೆ.
  3. ಕೃಷ್ಣ ಏಕಾಂಗಿಯಾಗಿ, ಆಯುಧಗಳು ಇಲ್ಲದೆಯೇ ಕುರುಕ್ಷೇತ್ರ ಯುದ್ಧದಲ್ಲಿ ಪಾಂಡವರಿಗೆ ಜಯ ತಂದುಕೊಡುತ್ತಾನೆ.
  4. ರಾಮಾಯಣದ ಜಾಂಬವಂತನನ್ನು ಎದುರಿಸಿ ಶ್ಯಮಂತಕ ಮಣಿಯನ್ನೂ, ಜಾಂಬವಂತನ ಮಗಳು ಜಾಂಬವತಿಯನ್ನೂ ಗೆಲ್ಲುವ ವೃಷ್ಣ, ಜಾಂಬವಂತನಿಗೆ ರಾಮಾಯಣದ ಶ್ರೀರಾಮಚಂದ್ರನ ರೂಪದಲ್ಲಿ ದರ್ಶನ ನೀಡುತ್ತಾನೆ.
  5. ರಾಮಾಯಣದಲ್ಲಿ ರಾಮನಾಗಿ ವಾಲಿಯನ್ನು ಕೊಂದಾಗ, ವಾಲಿಗೆ ಮುಂದಿನ ಅವತಾರದಲ್ಲಿ ನೀನು ನನ್ನನ್ನು ಕೊಲ್ಲುವೆಯಂತೆ ಎಂದು ಮಾತು ನೀಡಿರುತ್ತ್ತಾನೆ. ಅದರಂತೆಯೇ ಜರಾ ಎಂಬ ಬೇಡನಾಗಿ ಜನ್ಮ ತಾಳಿದ ವಾಲಿಯು, ವೃಷ್ಣನ ಕಾಲಿನ ಹೆಬ್ಬೆರಳನ್ನು ಜಿಂಕೆ ಎಂದು ಭಾವಿಸಿ ಬಾಣ ಹೊಡೆಯುತ್ತಾನೆ. ಆ ಬಾಣದಿಂದ ಜಗನ್ನಿಯಾಮಕ ಶ್ರೀ ವೃಷ್ಣ ಅಸು ನೀಗಿ ತನ್ನ ಅವತಾರವನ್ನು ಮುಗಿಸುತ್ತಾನೆ.[3]

ಕೃಷ್ಣನ ಇತರ ಹೆಸರುಗಳು

  1. ಅಚ್ಯುತ: ಚ್ಯುತಿಯಿಲ್ಲದವ, ಯಾವುದೇ ದೋಷ ಇಲ್ಲದವನು.
  2. ಅಸುರಾರಿ : ರಾಕ್ಷಸರಿಗೆ ಸದಾಕಾಲ ಶತ್ರುವಾಗಿದ್ದವನು.
  3. ವಾಸುದೇವ : ವಸುದೇವನ ಮಗ
  4. ನಂದಗೋಪಾಲ: ನಂದ ಗೋಪನ ಮಗನಾಗಿದ್ದವನು
  5. ಕಾಲದೇವ: ಯಮನನ್ನು ಮೀರಿಸಿದವ.
  6. ಗಿರಿಧರ: ಗೋವರ್ಧನ ಗಿರಿಯನ್ನು ತನ್ನ ಕಿರುಬೆರಳಲ್ಲೇ ಎತ್ತಿದವ
  7. ಕೊಲ್ಲ: ಎಮ್ಮೆಗಳನ್ನು ಪಾಲಿಸಿ, ಕಾಪಾಡುವವನು.
  8. ವೇಣುಗೋಪಾಲ : ಕೊಳಲನ್ನು ನುಡಿಸುವವನು.
  9. ಕೊಲ್ಲ: ಎಮ್ಮೆಗಳನ್ನು ರಕ್ಷಿಸುವವನು
  10. ಚಕ್ರಧಾರಿ: ಚಕ್ರಾಯುಧವನ್ನು ಧರಿಸಿದವನು
  11. ದ್ವಾರಕಾಧೀಶ/ದ್ವಾರಕಾನಾಥ: ದ್ವಾರಕಾನಗರಕ್ಕೆ ಒಡೆಯನಾದವನು
  12. ಜಗನ್ನಾಥ: ಜಗತ್ತಿಗೆ ನಾಯಕನಾದವನು
  13. ಜನಾರ್ದನ: ಎಲ್ಲರಿಗೂ ವರವನ್ನು ಕೊಡುವನು
  14. ಪತಿತ ಪಾವನ: (?) ಪಾಪಿಗಳನ್ನು ಉದ್ದರಿಸುವವನು
  15. ಪರಬ್ರಹ್ಮ: ಬ್ರಹ್ಮನ ತಂದೆ (ವಿಷ್ಣು)
  16. ಪಾರ್ಥ ಸಾರಥಿ: ಅರ್ಜುನನ ಸಾರಥಿ
  17. ಮಧುಸೂದನ: ಮಧು ಎಂಬ ರಾಕ್ಷಸನನ್ನು ನಾಶ ಮಾಡಿದವನು.
  18. ಮಾಧವ: ವಸಂತ ಋತು ತರುವವ, ಮಾ =ಲಕ್ಷ್ಮಿ -ಧವ =ಒಡೆಯ (?)
  19. ಮುಕುಂದ: ಮುಕ್ತಿಯನ್ನು ಕೊಡುವವನು
  20. ಯೋಗೇಶ್ವರ: ಯೋಗಿಗಳಿಗೆಲ್ಲಾ ಸ್ವಾಮಿಯಾದವನು
  21. ಶ್ಯಾಮಸುಂದರ: ಕಪ್ಪು ವರ್ಣದವನು
  22. ಹೃಷೀಕೇಶ: ಹೃಷಿಕಗಳನ್ನು(ಇಂದ್ರಿಯ) ಹಿಡಿದಿಟ್ಟವನು
  23. ಪುರುಷೋತ್ತಮ : ಪುರುಷರಲ್ಲೇ ಅತ್ಯುತ್ತಮನಾದವನು
  24. ನವನೀತ : ತಾಜಾ ಬೆಣ್ಣೆಯನ್ನು ತಿಂದವನು
  25. ಸುದರ್ಶನ : ಸುದರ್ಶನ ಚಕ್ರ ಹೊಂದಿದವ
  26. ಮುರಳಿ : ಕೊಳಲನ್ನು ಹೊಂದಿದವ
  27. ಜನಾರ್ಧನ :
  28. ಮುರಾರಿ :
  29. ಘನಶ್ಯಾಮ: ವೃಷ್ಣನ ಮೈಬಣ್ಣ ಮೋಡದಂತೆ ಕಪ್ಪು
  30. ದಾಮೋದರ:
  31. ಪಾಂಡುರಂಗ:
  32. ಕೇಶವ:
  33. ವಿಠಲ:
  34. ಶ್ರೀರಂಗನಾಥ:


ಉಲ್ಲೇಖಗಳು

  1. "vrishna Rajamannar with His Wives, Rukmini and Satyabhama, and His Mount, Garuda | LACMA Collections". collections.lacma.org. Retrieved 2014-09-23.
  2. 'ಕುಮಾರವ್ಯಾಸ ಭಾರತ'- ಆದಿಪರ್ವ ೧೭ ನೆಯ ಸಂಧಿ, ಪದ್ಯ ೧೦, ೧೧, ೧೨.
  3. https://www.speakingtree.in/allslides/krishna-s-death-a-tale-of-many-curses

ಬಾಹ್ಯ ಸಂಪರ್ಕಗಳು



ವಿಷ್ಣುವಿನ ಅವತಾರಗಳು

ಮತ್ಸ್ಯ | ಕೂರ್ಮ | ವರಾಹ | ನರಸಿಂಹ | ವಾಮನ | ಪರಶುರಾಮ | ರಾಮ | ಕೃಷ್ಣ | ಬಲರಾಮ | ಬುದ್ಧ | ಕಲ್ಕಿ


ಹಿಂದೂ ಧರ್ಮ | ಹಿಂದೂ ಪುರಾಣ | ಇತಿಹಾಸ
ದೇವತೆಗಳು: ಶಿವ | ಬ್ರಹ್ಮ | ವಿಷ್ಣು | ರಾಮ | ಕೃಷ್ಣ | ಗಣೇಶ | ಕಾರ್ತಿಕೇಯ | ಹನುಮಂತ | ಲಕ್ಷ್ಮಣ | ಇಂದ್ರ | ಸೂರ್ಯ
ಗಾಯತ್ರಿ | ಸರಸ್ವತಿ | ಲಕ್ಷ್ಮಿ | ಪಾರ್ವತಿ | ಚಾಮುಂಡೇಶ್ವರಿ | ಕಾಳಿ | ಸೀತೆ | ವೈಷ್ಣೋ ದೇವಿ | ರಾಧೆ

ಇತರ ದೇವತೆಗಳು

ಧರ್ಮಗ್ರಂಥಗಳು: ವೇದಗಳು | ಉಪನಿಷತ್ತುಗಳು | ಪುರಾಣಗಳು | ರಾಮಾಯಣ | ಮಹಾಭಾರತ | ಭಾಗವತ

( ಟೆಂಪ್ಲೇಟಿನಲ್ಲಿ ದಶಾವತಾರ ದ ೧೧ ಹೆಸರಿದೆ- ಅದರಲ್ಲಿ 'ಬಲರಾಮ ದಶಾವತಾರದಲ್ಲಿ ಸೇರುವುದಿಲ್ಲ- ಆದರೆ ಚೈತನ್ಯರು ಸೇರಿಸಿದ್ದಾರೆ, ಅದು ಆ ಪಂಥದವರಿಗೆ ಮಾತ್ರಾ ಅನ್ವಯ;.-ಅವನು ಆದಿಶೇಷನ ಅವತಾರವೆಂದು ಹೇಳುವರು)

This article is issued from Wikipedia. The text is licensed under Creative Commons - Attribution - Sharealike. Additional terms may apply for the media files.