ಭಾರತದ ಸ್ವಾತಂತ್ರ್ಯ ದಿನಾಚರಣೆ

ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನು ಪ್ರತಿ ವರ್ಷ ಆಗಸ್ಟ್ ೧೫ ರಂದು ಆಚರಿಸಲಾಗುತ್ತದೆ. ಬ್ರಿಟೀಷರ ಆಡಳಿತದಿಂದ ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ದೇಶದಾದ್ಯಂತ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ. ದೇಶದ ಹಲವೆಡೆ ತ್ರಿವರ್ಣ ಧ್ವಜವನ್ನು ಹಾರಿಸಿ ಸಿಹಿ ಹಂಚಲಾಗುತ್ತದೆ. ಈ ಆಚರಣೆಯ ಪ್ರಮುಖ ಸಮಾರಂಭ ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯತ್ತದೆ. ಈ ಸಮಾರಂಭದಲ್ಲಿ, ಭಾರತದ ಪ್ರಧಾನ ಮಂತ್ರಿಗಳು ರಾಷ್ಟ್ರೀಯ ಧ್ವಜವನ್ನು ಹಾರಿಸಿ ಭಾರತದ ರಾಷ್ಟ್ರಗೀತೆ "ಜನ ಗಣ ಮನ"ವನ್ನು ಹಾಡಿ ನಂತರ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡುತ್ತಾರೆ. ಈ ಭಾಷಣದಲ್ಲಿ ದೇಶದ ಸಾಧನೆ, ದೇಶದ ಮುಂದಿರುವ ಪ್ರಮುಖ ಸವಾಲುಗಳ ಬಗ್ಗೆ ಮಾತನಾಡಿ, ಕೆಲವು ಪ್ರಗತಿ ಯೋಜನೆಗಳನ್ನು ಪ್ರಕಟಿಸಲಾಗುತ್ತದೆ. ಈ ದಿನದಂದು ದೇಶದ ಸ್ವಾತ್ರಂತ್ರ್ಯಕ್ಕೆ ಮಡಿದ ನಾಯಕರನ್ನು ಸ್ಮರಿಸಲಾಗುತ್ತದೆ.[1]

ಭಾರತದ ಸ್ವಾತಂತ್ರ್ಯ ದಿನಾಚರಣೆ
ಭಾರತದ ರಾಷ್ಟ್ರೀಯ ಧ್ವಜವನ್ನು ದೆಹಲಿಯ ಕೆಂಪು ಕೋಟೆ ನಲ್ಲಿ ಹಾರಿಸಲಾಯಿತು; ಸ್ವಾತಂತ್ರ್ಯ ದಿನದಂದು ಸಾರ್ವಜನಿಕ ಮತ್ತು ಖಾಸಗಿ ಕಟ್ಟಡಗಳಲ್ಲಿ ಧ್ವಜಾರೋಹಣ ಸಾಮಾನ್ಯ ದೃಶ್ಯವಾಗಿದೆ.
ಆಚರಿಸಲಾಗುತ್ತದೆ ಭಾರತ
ರೀತಿರಾಷ್ಟ್ರೀಯ
ಮಹತ್ವಭಾರತದ ಸ್ವಾತಂತ್ರ್ಯವನ್ನು ನೆನಪಿಸುತ್ತದೆ
ಆಚರಣೆಗಳುಧ್ವಜಾರೋಹಣ , ಮೆರವಣಿಗೆ, ಪಟಾಕಿ, ದೇಶಭಕ್ತಿ ಗೀತೆಗಳು ಮತ್ತು ರಾಷ್ಟ್ರಗೀತೆ ಗಾಯನ, ಪ್ರಧಾನಿ ಮತ್ತು ರಾಷ್ಟ್ರಪತಿಗಳ ಭಾಷಣ
ದಿನಾಂಕಆಗಸ್ಟ್ 15
ಆವರ್ತನವಾರ್ಷಿಕ

ಸಾಹಿತ್ಯದಲ್ಲಿ ಸ್ವಾತಂತ್ರ್ಯದಿನ

ಸ್ವಾತಂತ್ರ್ಯದ ಮಾಂತ್ರಿಕ ಕ್ಷಣವನ್ನು ಕವಿ ಪ್ರದೀಪ್ ರು ಜಾಗೃತಿ (1954) ಚಿತ್ರದಲ್ಲಿ ಹೀಗೆ ಚಿತ್ರಿಸಿದ್ದಾರೆ:

ಸಂಭ್ರಮದಲ್ಲಿ ಆಚರಣೆ

ಭಾರತದ ಪ್ರಧಾನಮಂತ್ರಿ ದೆಹಲಿಯ ಕೆಂಪು ಕೋಟೆ ಯ ಐತಿಹಾಸಿಕ ಸ್ಥಳದಲ್ಲಿ ಆಗಸ್ಟ್ ೧೫ರಂದು ಭಾರತದ ಧ್ವಜದ ಆರೋಹಣವನ್ನು ನೆರವೇರಿಸುವರು

ಆಗಸ್ಟ್ 15 ಭಾರತದ ರಾಷ್ಟೀಯ ರಜಾದಿನವಾಗಿದೆ. ರಾಜಧಾನಿ ನವದೆಹಲಿ ಯಲ್ಲಿ ಬಹ್ವಂಶ ಸರಕಾರಿ ಕಚೇರಿಗಳು ವಿದ್ಯುದ್ದೀಪಗಳಿಂದ ಬೆಳಗುತ್ತವೆ ಎಲ್ಲಾ ರಾಜ್ಯ ರಾಜಧಾನಿಗಳಲ್ಲಿ ಧ್ವಜಾರೋಹಣ ಮತ್ತು ಸಾಂಸ್ಕೃತಿಕ ಸಮಾರಂಭಗಳು ಜರುಗುತ್ತವೆ. ದೇಶದಾದ್ಯಂತ ನಗರಗಳಲ್ಲಿ ಧ್ವಜಾರೋಹಣವನ್ನು ಆಯಾ ಕ್ಷೇತ್ರಗಳ ರಾಜಕೀಯ ಧುರೀಣರು ನೆರವೇರಿಸುತ್ತಾರೆ . ಖಾಸಗಿ ಸಂಸ್ಥೆಗಳಲ್ಲಿ ಧ್ವಜಾರೋಹಣವನ್ನು ಆಯಾ ಸಂಸ್ಥೆಯ ಹಿರಿಯ ಅಧಿಕಾರಿಗಳು ಮಾಡುತ್ತಾರೆ . ಶಾಲೆಕಾಲೇಜುಗಳು ತಮ್ಮ ಆವರಣದಲ್ಲಿ ಧ್ವಜಾರೋಹಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ. ಬಂಧುಮಿತ್ರರು ಭೋಜನಕೂಟ ಮತ್ತು ಪ್ರವಾಸಗಳಿಗೆಂದು ಸೇರುತ್ತಾರೆ. ಹೌಸಿಂಗ್ ಕಾಲನಿಗಳು , ಸಾಂಸ್ಕೃತಿಕ ಸಂಘ-ಸಂಸ್ಥೆಗಳು ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಮನರಂಜನಾ ಕಾರ್ಯಕ್ರಮಗಳನ್ನೂ, ಸ್ಪರ್ಧೆಗಳನ್ನೂ ಏರ್ಪಡಿಸುತ್ತಾರೆ.[6]

ಗಾಳಿಪಟಗಳ ಹಾರಾಟ

ಭಾರತದ ಅನೇಕ ಪ್ರದೇಶಗಳಲ್ಲಿ ಸ್ವಾತಂತ್ರ್ಯದಿನದಂದು ಗಾಳಿಪಟಗಳನ್ನು ಹಾರಿಸುವ ಪದ್ದತಿ ಜನಪ್ರಿಯವಾಗಿದೆ . ಅಕಾಶವು ನೂರಾರು ಬಣ್ಣ ಬಣ್ಣದ ಪಟಗಳಿಂದ ಕಂಗೊಳಿಸುವುದು. ಜನರು ಗಾಳಿಪಟಗಳನ್ನು ಹಾರಿಸುವ ಸ್ಪರ್ಧೆಗಳಲ್ಲಿ ತೊಡಗುವರು ಕಟ್ಟಡಗಳ ಬಾಲ್ಕನಿಗಳು ಮತ್ತು ಮನೆಗಳ ಮಾಳಿಗೆಗಳಿಂದ ಜನರು ಗಾಳಿಪಟಗಳನ್ನು ಬಾನಿಗೆ ಹಾರಬಿಡುವರು.ಸಂಜೆಯ ವೇಳೆ ಗಾಳಿಪಟಗಳು ಮುಗಿಲ ಮುಟ್ಟುವಂತೆ ಮೇಲೇರುತ್ತಿದ್ದಂತೆ ಮಕ್ಕಳ ಹರ್ಷೋಲ್ಲಾಸದ ಧ್ವನಿಗಳು ಎಲ್ಲೆಲ್ಲೂ ಕೇಳಬರುತ್ತವೆ .

ಬಾಹ್ಯ ಕೊಂಡಿಗಳು

ಉಲ್ಲೇಖಗಳು

  1. PTI (15 August 2013). "Manmohan first PM outside Nehru-Gandhi clan to hoist flag for 10th time" Archived 21 December 2013 at the Wayback Machine.. The Hindu. Retrieved 30 August 2013.
  2. https://www.linkedin.com/pulse/20140815144059-336000804-astrology-s-role-in-indian-independence-mahurat
  3. "Terror strike feared in Delhi ahead of Independence Day : MM-National, News – India Today". Indiatoday.intoday.in. 5 August 2015. Archived from the original on 7 August 2015. Retrieved 13 August 2015. Cite uses deprecated parameter |deadurl= (help)
  4. "69th Independence Day: Security Tightened at Red Fort as Terror Threat Looms Large on PM Modi". Ibtimes.co.in. 28 February 2015. Archived from the original on 14 August 2015. Retrieved 13 August 2015. Cite uses deprecated parameter |deadurl= (help)
  5. Metcalf, B.; Metcalf, T. R. (9 October 2006). A Concise History of Modern India (2nd ed.). Cambridge University Press. ISBN 978-0-521-68225-1.
  6. Wolpert, Stanley A. (12 October 1999). India. University of California Press. p. 204. ISBN 978-0-520-22172-7. Archived from the original on 9 May 2013. Retrieved 20 July 2012. Cite uses deprecated parameter |deadurl= (help)
This article is issued from Wikipedia. The text is licensed under Creative Commons - Attribution - Sharealike. Additional terms may apply for the media files.